Home ರಾಜ್ಯ ನೆಲಮಂಗಲದಲ್ಲಿ ಎರಡು ದಿನ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮುಸ್ಲಿಮ್ ಹೋರಾಟಗಾರರ ಭಾವಚಿತ್ರ ಪ್ರದರ್ಶನ

ನೆಲಮಂಗಲದಲ್ಲಿ ಎರಡು ದಿನ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮುಸ್ಲಿಮ್ ಹೋರಾಟಗಾರರ ಭಾವಚಿತ್ರ ಪ್ರದರ್ಶನ

ನೆಲಮಂಗಲ: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಮುಸ್ಲಿಮ್ ಹೋರಾಟಗಾರರ ಭಾವಚಿತ್ರವನ್ನು ಪ್ರದರ್ಶನ ಮಾಡಲಾಗಿದೆ.

ನೆಲಮಂಗಲದ ಮದೀನಾ ಮಸೀದಿಯ ಆವರಣದಲ್ಲಿ ಮುಸ್ಲಿಮ್ ಹೋರಾಟಗಾರರ ಭಾವಚಿತ್ರವನ್ನು ಪ್ರದರ್ಶನಕ್ಕೆ ಇಡಲಾಗಿದೆ.

ಅಲ್ಲದೆ ಭಾವಚಿತ್ರದ ಜೊತೆಗೆ ಮುಸ್ಲಿಮ್ ಹೋರಾಟಗಾರರ ಸ್ವಾತಂತ್ರ್ಯದ ತ್ಯಾಗ, ಬಲಿದಾನದ ವಿಶ್ಲೇಷಣೆಯನ್ನು ಕೂಡ ನೀಡಲಾಗುತ್ತಿದೆ.  

ಉಚಿತ ರಕ್ತದಾನ ಶಿಬಿರ, ಉಚಿತ ಕಣ್ಣಿನ ತಪಾಸಣೆ, ಉಚಿತ ಆರೋಗ್ಯ ತಪಾಸಣೆ ಹಾಗೂ ಹಿರಿಯ ನಾಗರಿಕರಿಗೆ ಸನ್ಮಾನ ಸಮಾರಂಭ ಕೂಡ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Join Whatsapp
Exit mobile version