Home ಟಾಪ್ ಸುದ್ದಿಗಳು ಸಕಲ ಸರಕಾರಿ ಗೌರವಗಳೊಂದಿಗೆ ಶಿವಾಜಿ ಪಾರ್ಕ್ ನಲ್ಲಿ ಇಂದು ಸಂಜೆ ಲತಾ ಅಂತ್ಯ ಸಂಸ್ಕಾರ

ಸಕಲ ಸರಕಾರಿ ಗೌರವಗಳೊಂದಿಗೆ ಶಿವಾಜಿ ಪಾರ್ಕ್ ನಲ್ಲಿ ಇಂದು ಸಂಜೆ ಲತಾ ಅಂತ್ಯ ಸಂಸ್ಕಾರ

ಮುಂಬೈ: ಇಂದು ಬೆಳಿಗ್ಗೆ ನಿಧನರಾದ ಲತಾ ಮಂಗೇಶ್ಕರ್ ಅವರ ಗೌರವಾರ್ಥ ರಾಷ್ಟ್ರದಾದ್ಯಂತ ಎರಡು ದಿನ ಶೋಕಾಚರಣೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಎರಡು ದಿನ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ಸರ್ಕಾರದ ಮೂಲಗಳಿಂದ ತಿಳಿದು ಬಂದಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.

ಇಂದು ಸಂಜೆ 6:30ಕ್ಕೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ.

ಕೋವಿಡ್–19 ದೃಢಪಟ್ಟ ಕಾರಣ ಜನವರಿ 8ರಂದು ಲತಾ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಇಂದು(ಭಾನುವಾರ) ಬೆಳಿಗ್ಗೆ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ.

Join Whatsapp
Exit mobile version