Home ಟಾಪ್ ಸುದ್ದಿಗಳು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರು ನೀರುಪಾಲು: ಸ್ನೇಹಿತನ ಹುಟ್ಟುಹಬ್ಬದಂದೇ ದುರಂತ!

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರು ನೀರುಪಾಲು: ಸ್ನೇಹಿತನ ಹುಟ್ಟುಹಬ್ಬದಂದೇ ದುರಂತ!

ಮೈಸೂರು: ಹುಟ್ಟು ಹಬ್ಬದ ಪಾರ್ಟಿಗೆ ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಡಿಮಾಲಂಗಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಅಭಿಷೇಕ್ (21) ಹಾಗೂ ಅಂಕೇಶ್ (21) ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕಿನಕಹಳ್ಳಿ ಗ್ರಾಮದ ನಿವಾಸಿಗಳಾದ ಇವರಿಬ್ಬರು, ಚಾಮರಾಜನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.


ತಡಿಮಾಲಂಗಿ ಗ್ರಾಮಕ್ಕೆ ಸ್ನೇಹಿತನ ಹುಟ್ಟುಹಬ್ಬಕ್ಕೆಂದು ತೆರಳಿದ್ದ ಸ್ನೇಹಿತರು, ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದು, ಇವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ಮೃತದೇಹಕ್ಕಾಗಿ ಶೋಧ ನಡೆಸುತ್ತಿದ್ದಾರೆ. ಈ ಕುರಿತು ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Join Whatsapp
Exit mobile version