ಕರ್ತವ್ಯಲೋಪ: ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಇಂಜಿನಿಯರ್​ಗಳು ಅಮಾನತು

Prasthutha|

ಬೆಂಗಳೂರು: ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ನಷ್ಟವಾಗುವಂತೆ ಕರ್ತವ್ಯಲೋಪವೆಸಗಿದ ಆರೋಪದಡಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್’ಗಳನ್ನು ಅಮಾನತು ಮಾಡಲಾಗಿದೆ.

- Advertisement -

 ತುಮಕೂರಿನ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷತೆ ಹಿನ್ನೆಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ತುಮಕೂರಿನ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ವಿಳಂಬ ಧೋರಣೆ ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷತೆಯಿಂದ ಸುಮಾರು ₹2.76 ಕೋಟಿ ರೂ. ನಷ್ಟಕ್ಕೆ ನೇರ ಕಾರಣವಾಗಿದ್ದ ಕಾರ್ಯಪಾಲಕ ಇಂಜಿನಿಯರ್ ಎಸ್.ಆರ್ ಹರೀಶ್ ಸೇವೆಯಿಂದ ಅಮಾನತು ಮಾಡಲಾಗಿದೆ.

- Advertisement -

ಅದೇ ರೀತಿ, ಯಾದಗಿರಿಯ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ 41 ವಿವಿಧ ಕಾಮಗಾರಿಗಳಲ್ಲಿ ಕರ್ತವ್ಯಲೋಪವೆಸಗಿ ಸರ್ಕಾರಕ್ಕೆ ಒಟ್ಟು ₹1.3 ಕೋಟಿ ರೂ. ನಷ್ಟ ಮಾಡಿದ್ದ ಕಾರ್ಯಪಾಲಕ ಇಂಜಿನಿಯರ್ ಬಸವರಾಜ. ಕೆ.ಹಲಚೇರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.