ಬೀದರ್: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕಿಯರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಫುಲ್ದರ್ವಾಡಿ ಗ್ರಾಮದಲ್ಲಿ ನಡೆದಿದೆ.
ಸಕ್ಕುಬಾಯಿ ಸುರೇಶ(16), ಚಾಂದನಿ ಬಾಬುರಾವ (16) ಮೃತರು.
10ನೇ ತರಗತಿಯಲ್ಲಿ ಓದುತ್ತಿದ್ದ ಈ ಬಾಲಕಿಯರು, ಗ್ರಾಮದ ಬಳಿಯ ಕೆರೆಯಲ್ಲಿ ಬಟ್ಟೆ ತೊಳೆದು ನಂತರ ಈಜಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.