ಸುಳ್ಳು ಪ್ರಕರಣ ದಾಖಲಿಸಿದ ಎಎಸ್ ಐ ಸೇರಿ ಇಬ್ಬರು ಸಸ್ಪೆಂಡ್

Prasthutha: December 4, 2021

ಮೈಸೂರು: ಸುಳ್ಳು ಪ್ರಕರಣ ದಾಖಲಿಸಿ ಹಣ ವಸೂಲಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಜರ್ ಬಾದ್ ಠಾಣೆಯ ಎಎಸ್ ಐ ಸೇರಿ ಇಬ್ಬರು ಪೊಲೀಸರನ್ನು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅಮಾನತು ಮಾಡಿ ತನಿಖೆಗೆ ಆದೇಶಿಸಿದ್ದಾರೆ.
ನಜರ್ ಬಾದ್ ಠಾಣೆಯ ಎಎಸ್ಐ ಗೋವಿಂದನಾಯಕ ಹಾಗೂ ಹೆಡ್ ಕಾನ್ಸ್ ಟೇಬಲ್ ಚನ್ನಬಸಪ್ಪರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.


ಕಳೆದ ಅ. 17 ರಂದು ಕೆ.ಸಿ.ಬಡಾವಣೆಯ ಆರ್ಚ್ ಬಳಿ ನಡೆದಿದ್ದ ಸಣ್ಣ ಗಲಾಟೆಗೆ ಸಂಬಂಧಿಸಿದಂತೆ ಕೆಲವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿತ್ತು.


ಬಳಿಕ ಪ್ರಕರಣವನ್ನು ಇತ್ಯರ್ಥ ಪಡಿಸಲು ಹಣ ನೀಡುವಂತೆ ಪೊಲೀಸರು ಮತ್ತು ಇತರ ವ್ಯಕ್ತಿ ನಡುವೆ ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು. ಈ ಸಂಬಂಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ನಗರ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದರು.ದೂರು ಸ್ವೀಕರಿಸಿದ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ, ನಜರ್ ಬಾದ್ ಠಾಣೆಯ ಇಬ್ಬರು ಪೊಲೀಸರನ್ನು ಸೇವೆಯಿಂದ ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!