Home ಟಾಪ್ ಸುದ್ದಿಗಳು ಉತ್ತರ ಪ್ರದೇಶದಲ್ಲಿ ಕಟ್ಟಡ ಕುಸಿತ: ಇಬ್ಬರು ಸಾವು, 17 ಮಂದಿಗೆ ಗಾಯ

ಉತ್ತರ ಪ್ರದೇಶದಲ್ಲಿ ಕಟ್ಟಡ ಕುಸಿತ: ಇಬ್ಬರು ಸಾವು, 17 ಮಂದಿಗೆ ಗಾಯ

ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ಭಾನುವಾರ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಪೊಲೀಸರು ಮಾರುಕಟ್ಟೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 19 ಕಾರ್ಮಿಕರನ್ನು ಹೊರತೆಗೆಯಲಾಯಿತು, ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.


ಗಾಯಗೊಂಡಿರುವ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವ ಕಾಂತ್ ಠಾಕೂರ್ ಪ್ರಕಾರ, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಾರುಕಟ್ಟೆ ಮಾಲೀಕ ಹಾಗೂ ಗುತ್ತಿಗೆದಾರರನ್ನು ಪೊಲೀಸರು ಬಂಧಿಸಿದ್ದಾರೆ.

Join Whatsapp
Exit mobile version