ಪರೀಕ್ಷಾರ್ಥ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಮೃತ್ಯು: ತನಿಖೆಗೆ ಆದೇಶ

Prasthutha|

ಇಂದೋರ್: ಮಧ್ಯಪ್ರದೇಶದ ಇಂದೋರ್ ನಲ್ಲಿ ಪರೀಕ್ಷಾರ್ಥ ಚಾಲನೆ ನಡೆಸುವಾಗ ರೈಲೊಂದು ಇಬ್ಬರು ಹತ್ತನೆ ತರಗತಿ ವಿದ್ಯಾರ್ಥಿನಿಯರ ಮೇಲೆ ಹರಿದ ಪರಿಣಾಮ ಅವರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

ಮೃತ ವಿದ್ಯಾರ್ಥಿನಿಯರನ್ನು ಬಬ್ಲಿ ಮಸಾರೆ (17) ಹಾಗೂ ರಾಧಿಕಾ ಭಾಸ್ಕರ್ (17) ಎಂದು ಗುರುತಿಸಲಾಗಿದೆ.

ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಿದ್ಯಾರ್ಥಿಗಳ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಗುರುವಾರ ಸಂಜೆ ಟ್ಯೂಷನ್ ಮುಗಿಸಿಕೊಂಡು ವಾಪಸ್ ಮನೆಗೆ ಹೋಗುತ್ತಿದ್ದ ಈ ವಿದ್ಯಾರ್ಥಿನಿಯರು ಕೈಲೋದ್ ಹಾಲಾ ಎಂಬ ಪ್ರದೇಶದ ಬಳಿ ಈಚೆಗೆ ನಿರ್ಮಿಸಲಾಗಿದ್ದ ರೈಲು ಹಳಿಯನ್ನು ದಾಟುತ್ತಿದ್ದರು. ಈ ವೇಳೆ ಇದೇ ಹಳಿಯಲ್ಲಿ ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲು ಡಿಕ್ಕಿಯಾಗಿ ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತರಾಗಿದ್ದಾರೆ.



Join Whatsapp