ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್​’ಗೆ ಬೈಕ್ ಡಿಕ್ಕಿ: ಇಬ್ಬರು ಮೃತ್ಯು

Prasthutha|

ವಿಜಯಪುರ: ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್​ ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲಗಬಾಲ್ ಕ್ರಾಸ್ ಬಳಿ ನಡೆದಿದೆ.

- Advertisement -

ತುಂಬಗಿ ಗ್ರಾಮದ ಮೆಹಬೂಬ್ (35) ಮತ್ತು ಹುಸೇನ್ ​(38) ಮೃತರು.
ಮೆಹಬೂಬ್ ಮತ್ತು ಹುಸೇನ್ ಬೈಕ್ ಮೂಲಕ ತಾಳಿಕೋಟೆಯಿಂದ ಮುದ್ದೇಬಿಹಾಳಕ್ಕೆ ತೆರಳುತ್ತಿದ್ದಾಗ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Join Whatsapp