ಬ್ರಿಜ್ ಭೂಷಣ್ ಸಿಂಗ್ ಪುತ್ರನ ಬೆಂಗಾವಲು ವಾಹನ ಡಿಕ್ಕಿ: ಇಬ್ಬರು ಸಾವು

Prasthutha|

ಲಖನೌ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರ ಬೆಂಗಾವಲು ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -


ಮೃತರನ್ನು ರೆಹಾನ್ ಖಾನ್ ಮತ್ತು ಶೆಹಜಾದ್ ಖಾನ್ ಎಂದು ಗುರುತಿಸಲಾಗಿದೆ. ಶೆಹಜಾದ್ ಖಾನ್ ಗಲ್ಫ್ ರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದು, ಎರಡು ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದ ಎನ್ನಲಾಗಿದೆ.
ಘಟನೆ ಸಂಬಂಧ ಕರ್ನೈಲ್ ಗಂಜ್ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ನಂತರ ಪರಾರಿಯಾಗಿರುವ ಯತ್ನಿಸಿದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp