ಡಿವೈಡರ್‌ಗೆ ಕಾರು ಡಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು

Prasthutha|

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ  ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ಹೊರ ವಲಯದ ಕಣಿವೆ ಕ್ರಾಸ್ ಬಳಿ ನಡೆದಿದೆ.

- Advertisement -

ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.

ನಿರಂಜನ್ (42) ಚೆನ್ನಮ್ಮ (67) ಮೃತಪಟ್ಟವರು. ಗಂಭೀರ ಗಾಯಗೊಂಡ ಮಹಿಳೆ ರತ್ನಮ್ಮ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

ಚಿಕ್ಕಮಗಳೂರಿನಿಂದ ಕಡೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಮೃತರು ಚಿಕ್ಕಮಗಳೂರಿನ ವಿಜಯಪುರ ಬಡಾವಣೆ ನಿವಾಸಿಗಳು ಎಂದು ತಿಳಿದುಬಂದಿದೆ.

ಮೃತ ನಿರಂಜನ್ ಖಾಸಗಿ ಆಸ್ಪತ್ರೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಸಖರಾಯಪಟ್ಟಣ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Join Whatsapp