ಡಿವೈಡರ್ ಗೆ ಕಾರು ಡಿಕ್ಕಿ: ಇಬ್ಬರು ಮೃತ್ಯು

Prasthutha|

ಧಾರವಾಡ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಮತ್ತಿಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

- Advertisement -


ಧಾರವಾಡದಿಂದ ದಾಬಾಕ್ಕೆ ಊಟಕ್ಕೆಂದು ಹೋಗಿದ್ದ ವಿನಯ್ ಹಿರೇಮಠ (24) ಹಾಗೂ ಸಂದೀಪ್ (29) ಮೃತರು.


ಊಟ ಮಾಡಿಕೊಂಡು ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರಿಂದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

- Advertisement -


ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

Join Whatsapp