ಸಿತಾರ್ಗಂಜ್(ಉತ್ತರಾಖಂಡ): ಶಾಲಾ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಸೇರಿ ಮೂವರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಶಾಲಾ ಮಕ್ಕಳು ಮತ್ತು ಸಿಬ್ಬಂದಿಯನ್ನು ಪಿಕ್ನಿಕ್ನಿಂದ ವಾಪಸ್ ಕರೆತರುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ 74ರ ಸಿಸೈಯಾನ್ ಬಳಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಮೃತಪಟ್ಟು 30 ಮಂದಿ ಗಾಯಗೊಂಡಿದ್ದಾರೆ ಎಂದು ಸಿತಾರ್ಗಂಜ್ನ ಉಪವಿಭಾಗಾಧಿಕಾರಿ ತುಷಾರ್ ಸೈನಿ ಹೇಳಿದ್ದಾರೆ.
14 ವರ್ಷದ ವಿದ್ಯಾರ್ಥಿನಿ ಮತ್ತು 35 ವರ್ಷದ ಶಿಕ್ಷಕರು ಅಪಘಾತಕ್ಕೆ ಬಲಿಯಾಗಿದ್ದು, ಗಾಯಗೊಂಡಿರುವ 30ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 22 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಉನ್ನತ ಆಸ್ಪತ್ರೆಗಳಿಗೆ ಕಳುಹಿಸಲು ಸೂಚಿಸಲಾಗಿದೆ ಎಂದು ಸೈನಿ ಹೇಳಿದ್ದಾರೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.