ಗಣೇಶ ಮೂರ್ತಿ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿ: ಇಬ್ಬರು ಸಾವು

Prasthutha|

ಚಿಕ್ಕಮಗಳೂರು: ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.

- Advertisement -


ಶ್ರೀಧರ್ (20) ಧನುಷ್ (20) ಮೃತ ಯುವಕರು.


ಗಣಪತಿ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.

- Advertisement -


ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಯುವಕರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳೆಲ್ಲರು ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ.



Join Whatsapp