ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

Prasthutha|

ತುಮಕೂರು: ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

- Advertisement -


ಕಾರು ಚಾಲಕ ಶಂಕರ್ (35), ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಮೃತರು.


ಅಪಘಾತದಲ್ಲಿ ಇನ್ನೊರ್ವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು, ಮೃತರು ಗಂಗಾವತಿ ಮೂಲದವರು ಎಂದು ತಿಳಿದು ಬಂದಿದೆ.



Join Whatsapp