ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿ: ಇಬ್ಬರು ಮೃತ್ಯು

Prasthutha|

ವಿಜಯಪುರ: ಎರಡು ಬಸ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ ಕವಲಗಿ ಗ್ರಾಮದ ಬಳಿ ನಡೆದಿದೆ.

- Advertisement -


ಸಾಜೀದಾ ಬೇಗಂ ಮಕಾನದಾರ್ (36) ಮತ್ತು ರೋಹಿಣಿ ಪಂಚಾಳ (31) ಮೃತರು.


ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರ ಮೃತಪಟ್ಟಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -


ಸಾಜೀದಾ ಮೂಲತಃ ಬಸನವಬಾಗೇಬಾಡಿ ತಾಲೂಕಿನ ಡೋಣೂರ ಗ್ರಾಮದವರಾದರೆ, ಮೃತ ರೋಹಿಣಿ ಕಲಬುರಗಿ ಪಟ್ಟಣದ ನಿವಾಸಿ ಎಂದು ತಿಳಿದುಬಂದಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Join Whatsapp