Home ತಂತ್ರಜ್ಞಾನ ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿ: ಇಬ್ಬರು ಮೃತ್ಯು

ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿ: ಇಬ್ಬರು ಮೃತ್ಯು

ವಿಜಯಪುರ: ಎರಡು ಬಸ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ ಕವಲಗಿ ಗ್ರಾಮದ ಬಳಿ ನಡೆದಿದೆ.


ಸಾಜೀದಾ ಬೇಗಂ ಮಕಾನದಾರ್ (36) ಮತ್ತು ರೋಹಿಣಿ ಪಂಚಾಳ (31) ಮೃತರು.


ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರ ಮೃತಪಟ್ಟಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.


ಸಾಜೀದಾ ಮೂಲತಃ ಬಸನವಬಾಗೇಬಾಡಿ ತಾಲೂಕಿನ ಡೋಣೂರ ಗ್ರಾಮದವರಾದರೆ, ಮೃತ ರೋಹಿಣಿ ಕಲಬುರಗಿ ಪಟ್ಟಣದ ನಿವಾಸಿ ಎಂದು ತಿಳಿದುಬಂದಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Join Whatsapp
Exit mobile version