ಬಸ್- ಟಿಟಿ ನಡುವೆ ಅಪಘಾತ: ಇಬ್ಬರು ಸಾವು, ನಾಲ್ವರಿಗೆ ಗಾಯ

Prasthutha|

ತುಮಕೂರು: ನಿಂತಿದ್ದ ಬಸ್ ಗೆ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ರಾಜ್ಯ ಹೆದ್ದಾರಿ 33 ಹುಲಿಯೂರು ದುರ್ಗ ಹೋಬಳಿಯ ಡಿ.ಹೊಸಹಳ್ಳಿ ಗ್ರಾಮದ ಬಳಿ ನಡೆದಿದೆ.

- Advertisement -


ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿ ಟಿಟಿ ಚಾಲಕ ವೀರೇಶ್ (30), ಶಶಿಕಲಾ (69) ಸಾವನ್ನಪ್ಪಿದ್ದಾರೆ. ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ ಹಾಗೂ ಪ್ರತೀಕ್ಷ ಎಂಬವರು ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ


ಶಶಿಕಲಾ ಹಾಗೂ ಅವರ ಕುಟುಂಬದ 11 ಮಂದಿ ಸದಸ್ಯರು ಸಿಂಧನೂರಿನಿಂದ ಮೈಸೂರಿಗೆ ಪ್ರವಾಸಕ್ಕೆಂದು ರಾತ್ರಿ ಹೊರಟಿದ್ದರು. ಕುಣಿಗಲ್ ಮಾರ್ಗವಾಗಿ ಮೈಸೂರಿಗೆ ಹೋಗುತ್ತಿದ್ದ ಸಂದರ್ಭ ಗುರುವಾರ ಬೆಳಗ್ಗೆ ಡಿ.ಹೊಸಹಳ್ಳಿ ಗ್ರಾಮದ ಬಳಿ ನಿಂತಿದ್ದ ಖಾಸಗಿ ಬಸ್ಗೆ ಟಿಟಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.



Join Whatsapp
Exit mobile version