ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ಮೃತ್ಯು

Prasthutha|

ಬೆಂಗಳೂರು: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿರುವ ದಾರುಣ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗೇಟ್ ಬಳಿ ನಡೆದಿದೆ.

- Advertisement -

ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದ ಮಹೇಶ್ ಹಾಗೂ ಕೃಷ್ಣ ಸ್ಥಳದಲ್ಲೇ ಸಾವನ್ನಪ್ಪಿದವರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

ತಿರುಪತಿಯಿಂದ ಮರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮುಂದೆ ಹೋಗುತ್ತಿದ್ದ ಕ್ಯಾಂಟರ್’ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

- Advertisement -

ನಿದ್ದೆಯ ಮಂಪರಿನಲ್ಲಿ ಚಾಲಕ ವೇಗವಾಗಿ ಟಿಟಿ ಚಲಾಯಿಸಿ ಕ್ಯಾಂಟರ್’ಗೆ ಗುದ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp