ಹೆಜಮಾಡಿ ಟೋಲ್ ಗೇಟ್ ಬಳಿ ಭೀಕರ ಅಪಘಾತ: ಇಬ್ಬರು ಮೃತ್ಯು

Prasthutha|

ಮೂಲ್ಕಿ: ಸ್ಕೂಟರ್ ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಹೆಜಮಾಡಿ ಟೋಲ್ ಗೇಟ್ ಸಮೀಪ ಇಂದು ಮಧ್ಯಾಹ್ನ ನಡೆದಿದೆ.

- Advertisement -

ತೀರ್ಥಹಳ್ಳಿ ಮೂಲದ ಮಧ್ಯ ವಯಸ್ಕ ಮಹಿಳೆ ಹಾಗೂ ವ್ಯಕ್ತಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಸ್ಕೂಟರ್ ಟ್ಯಾಂಕರ್ ಗೆ ಗುದ್ದಿದೆ.

ಘಟನೆಯಲ್ಲಿ ಇಬ್ಬರೂ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮೂಲ್ಕಿ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Join Whatsapp