ಬೆಂಗಳೂರಿನ ನೈಸ್ ರಸ್ತೆಯಲ್ಲಿ ಅಪಘಾತ: ಇಬ್ಬರು ಸಾವು

Prasthutha|

ಬೆಂಗಳೂರು: ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ.

- Advertisement -


ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ .

Join Whatsapp