Home ಟಾಪ್ ಸುದ್ದಿಗಳು ನಿರ್ಮಾಣ ಹಂತದ ಕಟ್ಟಡ ಕುಸಿತ: ಇಬ್ಬರು ಸಾವು, ಹಲವರಿಗೆ ಗಾಯ

ನಿರ್ಮಾಣ ಹಂತದ ಕಟ್ಟಡ ಕುಸಿತ: ಇಬ್ಬರು ಸಾವು, ಹಲವರಿಗೆ ಗಾಯ

ದಕ್ಷಿಣ ಕೋಲ್ಕತ್ತಾದ ಮೆಟಿಯಾಬ್ರೂಜ್‌ನಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದಿದೆ. ಈ ದುರ್ಘಟನೆಯಲ್ಲಿ 2 ಮಂದಿ ಸಾವನ್ನಪ್ಪಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ. ಭಾನುವಾರ ತಡರಾತ್ರಿ ಕೋಲ್ಕತ್ತಾದಲ್ಲಿ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಾರ್ಡನ್ ರೀಚ್ ಪ್ರದೇಶದ ಹಜಾರಿ ಮೊಲ್ಲಾ ಬಗಾನ್‌ನಲ್ಲಿ ಮಧ್ಯರಾತ್ರಿಯ ಸುಮಾರಿಗೆ ಐದು ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳಡಿ ಸಿಲುಕಿರುವ ಬದುಕುಳಿದವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

Join Whatsapp
Exit mobile version