ಜಾತ್ರೆಗೆ ತೆರಳುತ್ತಿದ್ದವರ ಕಾರು ಮರಕ್ಕೆ ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಾಯ

Prasthutha|

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಡಗೋಡು ತಾಲೂಕಿನ ಪಾಳಾ ಕ್ರಾಸ್ ಬಳಿ ನಡೆದಿದೆ.

- Advertisement -


ಪಟ್ಟಣದ ಬಸವನ ಬೀದಿಯ ಗಣೇಶ್ ಗಾಣಿಗೇರ, ಮಹೇಶ್ ಗಾಣಿಗೇರ ಮೃತರು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಪಾಳಾ ಗ್ರಾಮದಲ್ಲಿ ಮಾರಿಕಾಂಬಾ ದೇವಿಯ ಜಾತ್ರೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಹುಬ್ಬಳ್ಳಿಯ ರಾಜ್ಯ ಹೆದ್ದಾರಿಯಲ್ಲಿನ ಪಾಳಾ ಕ್ರಾಸ್ ಬಳಿ ತಿರುವು ತೆಗೆದುಕೊಳ್ಳುತ್ತಿರುವಾಗ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp