Home ಕರಾವಳಿ ಜಾತ್ರೆಗೆ ತೆರಳುತ್ತಿದ್ದವರ ಕಾರು ಮರಕ್ಕೆ ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಾಯ

ಜಾತ್ರೆಗೆ ತೆರಳುತ್ತಿದ್ದವರ ಕಾರು ಮರಕ್ಕೆ ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಾಯ

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಡಗೋಡು ತಾಲೂಕಿನ ಪಾಳಾ ಕ್ರಾಸ್ ಬಳಿ ನಡೆದಿದೆ.


ಪಟ್ಟಣದ ಬಸವನ ಬೀದಿಯ ಗಣೇಶ್ ಗಾಣಿಗೇರ, ಮಹೇಶ್ ಗಾಣಿಗೇರ ಮೃತರು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಪಾಳಾ ಗ್ರಾಮದಲ್ಲಿ ಮಾರಿಕಾಂಬಾ ದೇವಿಯ ಜಾತ್ರೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಹುಬ್ಬಳ್ಳಿಯ ರಾಜ್ಯ ಹೆದ್ದಾರಿಯಲ್ಲಿನ ಪಾಳಾ ಕ್ರಾಸ್ ಬಳಿ ತಿರುವು ತೆಗೆದುಕೊಳ್ಳುತ್ತಿರುವಾಗ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version