ಮನೆಯಲ್ಲಿ ಮದುವೆಗೆ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ

Prasthutha|

ಬಾಗಲಕೋಟೆ: ಮನೆಯಲ್ಲಿ ತಮ್ಮ ಮದುವೆ ಒಪ್ಪಲಿಲ್ಲವೆಂದು ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ನಡೆದಿದೆ.

- Advertisement -


ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತರು.


ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಹುಡುಗನ ಮನೆಯವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -


ಸಚಿನ್ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದರು. ಇಬ್ಬರದ್ದು ಬೇರೆ ಬೇರೆ ಜಾತಿಯಾಗಿದ್ದರಿಂದ ಸಚಿನ್ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಸಚಿನ್, ತಮ್ಮ ಪ್ರೇಯಸಿ ಪ್ರಿಯಾಳಿಗೆ ತಿಳಿಸಿದ್ದಾನೆ. ಇದರಿಂದ ಮನನೊಂದ ಪ್ರೇಮಿಗಳು ಗುರುವಾರ ರಾತ್ರಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.



Join Whatsapp