ಶಿರವಸ್ತ್ರ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮತ್ತೆರಡು ಮೇಲ್ಮನವಿ

Prasthutha|

ಹೊಸದಿಲ್ಲಿ: ಶಿರವಸ್ತ್ರ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಎರಡು ಮುಸ್ಲಿಂ ಸಂಘಟನೆಗಳು  ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ.

- Advertisement -

ಮುಸ್ಲಿಂ ಮಹಿಳೆಯರು ಶಿರವಸ್ತ್ರ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಭಿಪ್ರಾಯಪಟ್ಟ ನಂತರ ತರಗತಿಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಇಸ್ಲಾಮಿಕ್ ಧಾರ್ಮಿಕ ವಿಧ್ವಾಂಸರ ಸಂಘಟನೆ “ಸಮಸ್ತ ಕೇರಳ ಜಮ್-ಇಯ್ಯತುಲ್ ಉಲಮಾ” ಸುಪ್ರೀಂ ಕೋರ್ಟ್  ನಲ್ಲಿ  ವಿಶೇಷ ಅರ್ಜಿಯನ್ನು ಸಲ್ಲಿಸಿದೆ.

ಉಚ್ಚ ನ್ಯಾಯಾಲಯದ ತೀರ್ಪು ಪವಿತ್ರ ಕುರ್ ಆನ್ ಮತ್ತು ಹದೀಸ್ ಗಳ ತಪ್ಪು ವ್ಯಾಖ್ಯಾನ ಮತ್ತು ಇಸ್ಲಾಮಿಕ್ ಕಾನೂನಿನ ತಪ್ಪು ತಿಳುವಳಿಕೆಯನ್ನು ಆಧರಿಸಿದೆ ಎಂದು ಸಂಘಟನೆ ಹೇಳಿದೆ.

- Advertisement -

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯೂ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದೆ.

ಸಂತ್ರಸ್ತ ವಿದ್ಯಾರ್ಥಿನಿಯರೂ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಹೋಳಿ ಹಬ್ಬದ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿತ್ತು. ಆದರೆ ಹಬ್ಬದ ಬಳಿಕ ತುರ್ತು ವಿಚಾರಣೆಗೆ ನಿರಾಕರಿಸಿದೆ. ಈ ಮಧ್ಯೆ ಮತ್ತೆರಡು ಮೇಲ್ಮನವಿಗಳು ಸಲ್ಲಿಕೆಯಾಗಿವೆ.



Join Whatsapp