ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ಮತ್ತಿಬ್ಬರು ಸೆರೆ

Prasthutha: January 23, 2022

ಬೆಂಗಳೂರು:  ಸ್ಯಾಂಡಲ್ ವುಡ್ ನಿರ್ಮಾಪಕ ಉಮಾಪತಿ ಹತ್ಯೆಗೆ ‌ಸಂಚು ರೂಪಿಸಿದ್ದ ಪ್ರಕರಣದ ಸಂಬಂಧ  ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಸಂಬಂಧ ಈಗಾಗಲೇ 15 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿ, ಜೈಲಿಗೆ ಕಳುಹಿಸಿದ್ದು ಮತ್ತಿಬ್ಬರ ಬಂಧನದಿಂದ ಬಂಧಿತ ಆರೋಪಿಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಕಳೆದ ವರ್ಷ ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಈ ಸಂಬಂಧ ಉಮಾಪತಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಹಲವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದರು. ಇದೇ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದರು.

ಸುಂಕದಕಟ್ಟೆಯ ಬಾರ್ ಒಂದರ ಬಳಿಯಲ್ಲಿ ಈ ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿದ್ದಂತ ದರ್ಶನ್ ಮತ್ತು ಸಂಜು ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಕರಣದ  16, 17ನೇ ಆರೋಪಿಗಳಾಗಿದ್ದರು. ಇವರನ್ನು ಜಯನಗರ ಪೊಲೀಸರ ವಶಕ್ಕೆ ನೀಡಲಾಗಿದೆ. ಜಯನಗರ ಪೊಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!