ಸಿದ್ದರಾಮಯ್ಯ ಭೇಟಿ ಮಾಡಿದ ಬಿಜೆಪಿಯ ಇನ್ನಿಬ್ಬರು ಮಾಜಿ ಶಾಸಕರು: ಕಾಂಗ್ರೆಸ್ ಸೇರುವ ಇಂಗಿತ!

Prasthutha|

ಬೆಂಗಳೂರು: ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುವುದಾಗಿ ಬಹಿರಂಗವಾಗಿ ಘೋಷಿಸಿದ್ದ ಬಳಿಕ ಇನ್ನಿಬ್ಬರು ಮಾಜಿ ಶಾಸಕರು ಕೂಡ ಕಾಂಗ್ರೆಸ್‌ಗೆ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ.

- Advertisement -

ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಘೋಷಿಸಿದ ಬಳಿಕ ಹಲವಾರು ಬಿಜೆಪಿ ಮುಖಂಡರು ಅಸಮಾಧಾನಗೊಂಡಿರುವುದಾಗಿ ಮೂಲಗಳು ತಿಳಿಸಿವೆ.

ಇದೀಗ ಬಿಜೆಪಿಯ ಮಾಜಿ ಶಾಸಕರಾದ ಎಂಪಿ ಕುಮಾರಸ್ವಾಮಿ ಮತ್ತು ರಾಮಪ್ಪ ಲಮಾಣಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಕಾಂಗ್ರೆಸ್ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಅಕ್ಟೋಬರ್ 20 ರಂದು ಕಾಂಗ್ರೆಸ್ ಸೇರುವ ಇಚ್ಛೆಯನ್ನು ಘೋಷಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ.

ಇತ್ತೀಚೆಗಷ್ಟೇ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಕೂಡ ಬಿಜೆಪಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು, ಅವರು ಕಾಂಗ್ರೆಸ್ ಸೇರುವ ಸೂಚನೆ ಇದೆ.