Home ಟಾಪ್ ಸುದ್ದಿಗಳು ತೆಲಂಗಾಣದ ಬಿಆರ್‌ಎಸ್‌ ಪಕ್ಷದ ಮತ್ತಿಬ್ಬರು ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆ

ತೆಲಂಗಾಣದ ಬಿಆರ್‌ಎಸ್‌ ಪಕ್ಷದ ಮತ್ತಿಬ್ಬರು ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆ

ಹೈದರಾಬಾದ್‌: ತೆಲಂಗಾಣದ ಬಿಆರ್‌ಎಸ್‌ ಪಕ್ಷದ ಮತ್ತಿಬ್ಬರು ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ ಸೇರಿದ ಬಿಆರ್‌ಎಸ್‌ ಶಾಸಕರ ಸಂಖ್ಯೆ 9ಕ್ಕೆ ಏರಿದ್ದು, ವಿಧಾನಸಭೆಯಲ್ಲಿ ಬಿಆರ್‌ಎಸ್‌ ಬಲ 30ಕ್ಕೆ ಕುಸಿದಿದೆ.

ಸೆರಿಲಿಂಗಂಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಅರೆಕಪುಡಿ ಗಾಂಧಿ ಹಾಗೂ ರಾಜೇಂದ್ರನಗರ ವಿಧಾನ ಸಭಾ ಕ್ಷೇತ್ರದಿಂದ ಆಯ್ಕೆಯಾದ ಪ್ರಕಾಶ್‌ ಗೌಡ ಅವರು ರಾಜ್ಯದ ಮುಖ್ಯಮಂತ್ರಿ ಹಾಗೂ ಪಿಸಿಸಿ ಅಧ್ಯಕ್ಷ ಎ. ರೇವಂತ್‌ ರೆಡ್ಡಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಇದರಿಂದ ಕಾಂಗ್ರೆಸ್‌ ಶಾಸಕರ ಬಲ 74ಕ್ಕೆ ಏರಿಕೆ ಆಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 65 ಹಾಗೂ ಬಿಆರ್‌ಎಸ್‌ 39 ಸ್ಥಾನಗಳನ್ನು ಗೆದ್ದಿದ್ದವು ಇತ್ತೀಚೆಗೆ ಬಿಆರ್‌ಎಸ್‌ನ ಆರು ವಿಧಾನ ಪರಿಷತ್‌ ಸದಸ್ಯರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು

Join Whatsapp
Exit mobile version