ಚಿಕ್ಕಮಗಳೂರು: ಗೋ ಸಾಗಾಟ ಶಂಕೆ| ಇಬ್ಬರು ಮುಸ್ಲಿಮ್ ಯುವಕರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

Prasthutha|

ಚಿಕ್ಕಮಗಳೂರು: ಜಾನುವಾರು ಹತ್ಯೆ ಮಾಡಲಾಗುತ್ತಿದೆ ಎಂಬ ಆರೋಪದಲ್ಲಿ ನಕಲಿ ಗೋರಕ್ಷಕರು ಮುಸ್ಲಿಮ್ ಯುವಕರ ಮೇಲೆ ಹಲ್ಲೆ ನಡೆಸುವ ಕೃತ್ಯಗಳು ರಾಜ್ಯದಲ್ಲೂ ಮುಂದುವರಿದಿದೆ.

- Advertisement -

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಎಂಬಲ್ಲಿ ಇಬ್ಬರು ಮುಸ್ಲಿಮ್ ವ್ಯಕ್ತಿಗಳ ಮೇಲೆ ದುಷ್ಕರ್ಮಿಗಳ ತಂಡವೊಂದು ತೀವ್ರವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಹಲ್ಲೆ ನಡೆಸಿದ ಐವರು ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ಇದೇ ವೇಳೆ ಗೋ ಹತ್ಯೆ ನಿಷೇಧ ಕಾಯ್ದೆಯಡಿ ಹಲ್ಲೆಗೊಳಗಾದ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ವೀಡಿಯೋ ವೀಕ್ಷಿಸಿ…

- Advertisement -


ಈ ಸಂಬಂಧ ವಿಡಿಯೋ ವೈರಲ್ ಆಗಿದ್ದು, ವಾಹನವೊಂದನ್ನು ತಡೆದು ನಿಲ್ಲಿಸಿ ಇಬ್ಬರನ್ನು ಪ್ರಶ್ನಿಸುತ್ತಿರುವ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ವಿಡಿಯೋದಲ್ಲಿದೆ.



Join Whatsapp