ನವದೆಹಲಿ: ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ಹಾಗೂ ನ್ಯಾಯಮೂರ್ತಿ ಆರ್. ಮಹದೇವನ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್, ‘ಸಂವಿಧಾನ ನಿಬಂಧನೆಗಳ ಅನ್ವಯ, ಭಾರತದ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚಿಸಿ ರಾಷ್ಟ್ರಪತಿ ಅವರು ಇಬ್ಬರು ನ್ಯಾಯಮೂರ್ತಿಗಳಾದ ಕೋಟೀಶ್ವರ್ ಸಿಂಗ್ ಮತ್ತು ಮಹದೇವನ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಿಸಿದ್ದಾರೆ’ ಎಂದು ತಿಳಿಸಿದ್ದಾರೆ.
ಮಣಿಪುರ ಮೂಲದ ಸಿಂಗ್ ಅವರು ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ನ್ಯಾಯಮೂರ್ತಿ ಮಹದೇವನ್ ಅವರು ಮದ್ರಾಸ್ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.