ಖಾಸಗಿ ಬಸ್ ಪಲ್ಟಿ: ಇಬ್ಬರು ಪ್ರಯಾಣಿಕರ ಸಾವು, 7 ಮಂದಿ ಗಂಭೀರ

Prasthutha|

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿ ನಡೆದಿದೆ.

- Advertisement -

ಕಲಬುರಗಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ನಲ್ಲಿ 37 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಹತ್ತಿಗುಡೂರು ಬಳಿಯ ಹಳ್ಳದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಘಟನೆಯ ಪರಿಣಾಮ ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ.


ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಸುರಪುರ ಪೊಲೀಸರು ಬಸ್ ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ.



Join Whatsapp