Home ಟಾಪ್ ಸುದ್ದಿಗಳು ಹೊತ್ತಿ ಉರಿದ ಬಸ್: ಇಬ್ಬರು ಪ್ರಯಾಣಿಕರು ಮೃತ್ಯು

ಹೊತ್ತಿ ಉರಿದ ಬಸ್: ಇಬ್ಬರು ಪ್ರಯಾಣಿಕರು ಮೃತ್ಯು

ಗುರುಗ್ರಾಮ: ಬಸ್ ಗೆ ಏಕಾಏಕಿ ಬೆಂಕಿ ತಗುಲಿದ ಪರಿಣಾಮ, ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವದಹನವಾದ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುರುಗ್ರಾಮದ ಸಿಗ್ನೇಚರ್ ಟವರ್ ಮೇಲ್ಸೇತುವೆ ಬಳಿ ನಡೆದಿದೆ.


ದುರಂತದಲ್ಲಿ 12ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.


ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಗೆ ಬುಧವಾರ ರಾತ್ರಿ ಗುರುಗ್ರಾಮ್ ತಲುಪುತ್ತಿದ್ದಂತೆ ಬಸ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ ನಲ್ಲಿದ್ದ ಕೆಲ ಪ್ರಯಾಣಿಕರು ಬಸ್ ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ನಿದ್ರಾವಸ್ಥೆಯಲ್ಲಿದ್ದ ಇಬ್ಬರು ಬೆಂಕಿ ಕೆನ್ನಾಲಿಗೆಗೆ ಮೃತಪಟ್ಟಿದ್ದಾರೆ.

Join Whatsapp
Exit mobile version