Home ಟಾಪ್ ಸುದ್ದಿಗಳು ರಾಜ್ಯದಲ್ಲಿ ಸಿಡಿಲು ಬಡಿದು ಇಬ್ಬರು ಮೃತ್ಯು

ರಾಜ್ಯದಲ್ಲಿ ಸಿಡಿಲು ಬಡಿದು ಇಬ್ಬರು ಮೃತ್ಯು

ವಿಜಯಪುರ: ರಾಜ್ಯದಲ್ಲಿ ಬಿಸಿಲ ಬೇಗೆಗೆ ಜನರು ತತ್ತರಿಸುತ್ತಿರುವಾಗ ಕೆಲವು ಪ್ರದೇಶಗಲ್ಲಿ ಮಳೆಯಾಗಿದ್ದು, ಮಳೆ ಆರಂಭವಾಗುತ್ತಿದ್ದರಂತೆ ಗುಡುಗು-ಸಿಡಿಲಿನ ಆರ್ಭಟ ಕೂಡ ಜೋರಾಗಿತ್ತು ವಿಜಯಪುರ ಜಿಲ್ಲೆಯಲ್ಲಿ ಒಂದೇ ದಿನ ಸಿಡಿಲು ಬಡಿದು ಇಬ್ಬರು ಸಾವಿಗೀಡಾಗಿದ್ದಾರೆ.

ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡಲು ತೆರಳಿದ್ದ ವೇಳೆ ಸಿಡಿಲು ಬಡಿದು 45 ವರ್ಷದ ಸೋಮಶೇಖರ್ ಪಟ್ಟಣಶೆಟ್ಟಿ ಎಂಬವರು ಮೃತ ಪಟ್ಟಿದ್ದಾರೆ.

ವಿಜಯಪುರದ ಇಂಡಿ ತಾಲೂಕಿನದ್ದೇ ಆದ ಮಾವಿನಹಳ್ಳಿಯಲ್ಲಿ ಸಿಡಿಲು ಬಡಿದು ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ಬೀರಪ್ಪ ನಿಂಗಪ್ಪ (16) ಮೃತ ಬಾಲಕ. ಆತ ಜಮೀನಿನಲ್ಲಿ ಕೆಲಸ ಮಾಡಲು ಹೋದ ವೇಳೆ ದುರಂತ ಸಂಭವಿಸಿದೆ.

ರಾಜ್ಯದ ವಿಜಯಪುರ, ಚಿಕ್ಕಮಗಳೂರು, ಗದಗ, ಕಲಬುರಗಿ, ಬೆಳಗಾವಿ, ಧಾರವಾಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

Join Whatsapp
Exit mobile version