ಶ್ರೀನಗರ: ಶಂಕಿತ ಉಗ್ರರ ದಾಳಿಗೆ ಇಬ್ಬರು ಪೊಲೀಸರು ಹುತಾತ್ಮರಾಗಿ ಇಬ್ಬರು ನಾಗರಿಕರು ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನಲ್ಲಿ ನಡೆದಿದೆ.
ಉತ್ತರ ಕಾಶ್ಮೀರದ ಸೊಪೋರ್’ನ ಅರಂಪೋರಾ ಎಂಬ ಪ್ರದೇಶದಲ್ಲಿ ಶಂಕಿತ ಉಗ್ರರು ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಇಬ್ಬರು ಪೊಲೀಸರು ಹಾಗೂ ಇಬ್ಬರು ನಾಗರೀಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಪೊಲೀಸರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಹೇಳಿದ್ದಾರೆ.