ನಾಲ್ಕು ಉದ್ಯಮಿಗಳಿಗಾಗಿ ಇಬ್ಬರು ರಾಜಕಾರಣಿಗಳು ಕೆಲಸ ಮಾಡುತ್ತಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ

Prasthutha|

- Advertisement -

ನವದೆಹಲಿ: ದೇಶದ ನಾಲ್ಕೈದು ಉದ್ಯಮಿಗಳಿಗಾಗಿ ಇಬ್ಬರು ರಾಜಕಾರಣಿಗಳು ನಿರಂತರ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.

ನವದೆಹಲಿಯಲ್ಲಿ ಕಪ್ಪು ಪಟ್ಟಿ ಧರಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಹತ್ಯೆ ನಡೆಯುತ್ತಿದೆ. 70 ವರ್ಷದಿಂದ ಕಟ್ಟಿದ ವ್ಯವಸ್ಥೆ 8 ವರ್ಷದಲ್ಲಿ ನಾಶವಾಗುತ್ತಿದೆ. ದೇಶದಲ್ಲಿ 4 ಜನರ ಸರ್ವಾಧಿಕಾರ ನಡೆಯುತ್ತಿದೆ. ಬೆಲೆ ಏರಿಕೆ, ನಿರುದ್ಯೋಗ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಬಯಸುತ್ತಿದ್ದೇವೆ. ಆದರೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಜನರು ಸರ್ವಾಧಿಕಾರ ಆಡಳಿತದ ವಿರುದ್ಧ ಪ್ರತಿಭಟಿಸಿದರೆ ಸೇಡು ತೀರಿಸಿಕೊಳ್ಳಲಾಗುತ್ತಿದೆ. ಕೇಸ್ ಹಾಕಿ ಜೈಲಿಗೆ ಕಳುಹಿಸಲಾಗುತ್ತಿದೆ. ಜನರ ಯಾವುದೇ ವಿಷಯಗಳು ಚರ್ಚೆಯಾಗುತ್ತಿಲ್ಲ. ನಾಲ್ಕೈದು ಉದ್ಯಮಿಗಳಿಗಾಗಿ ಇಬ್ಬರು ರಾಜಕಾರಣಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp