ಚಿಕ್ಕಮಗಳೂರು: ಹುಲಿ ಉಗುರಿನ ಕಾವು ರಾಜ್ಯದಲ್ಲಿ ಜೋರಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ಇಬ್ಬರು ಅರ್ಚಕರ ಬಂಧನವಾಗಿದೆ. ಇಬ್ಬರೂ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದರು . ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದಲ್ಲಿ ಆರ್ಚಕರಾಗಿ ಕೆಲಸ ಮಾಡುತ್ತಿದ್ದ ಕೃಷ್ಣಾನಂದ ಹೊಳ್ಳ ಮತ್ತು ನಾಗೇಂದ್ರ ಜೋಯಿಸ ಬಂಧಿತ ಅರ್ಚಕರು.
ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.