ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕ ಪ್ರತಾಪ್ ಭಿಲ್ ಅವರ ವಿರುದ್ದ ಕಳೆದ ಹತ್ತು ತಿಂಗಳ ಅವಧಿಯಲ್ಲಿ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರತಾಪ್ ಭಿಲ್ ರಾಜಸ್ಥಾನದ ಗೋಗುಂಡಾ ಕ್ಷೇತ್ರದ ಬಿಜೆಪಿ ಶಾಸಕ. ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ಮದುವೆಯಾಗುವುದಾಗಿ ನಂಬಿಸಿ ಶಾಸಕ ಪ್ರತಾಪ್ ಭಿಲ್ ಅತ್ಯಾಚಾರ ನಡೆಸಿದ್ದಾನೆ ಎಂದು ಸಂತ್ರಸ್ಥೆ ಮಹಿಳೆಯರು ದೂರಿನಲ್ಲಿ ತಿಳಿಸಿದ್ದಾರೆ.
ಉದ್ಯೋಗ ನೀಡುವುದಾಗಿ ಪ್ರತಾಪ್ ಭಿಲ್ ತನ್ನ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ಥೆ ದೂರಿದ್ದಾಳೆ.
ಸುಖೇರ್ ನಲ್ಲಿ 10 ತಿಂಗಳ ಹಿಂದೆ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಿಐಡಿ ತನಿಖೆ ನಡೆಯುತ್ತಿದೆ.