Home ಟಾಪ್ ಸುದ್ದಿಗಳು ಪುಣೆ ಕಾರು ಅಪಘಾತ: ಬಾಲಕನಿಗೆ ಮದ್ಯ ಪೂರೈಸಿದ್ದ ಎರಡು ರೆಸ್ಟೋರೆಂಟ್ ಗಳಿಗೆ ಬೀಗ

ಪುಣೆ ಕಾರು ಅಪಘಾತ: ಬಾಲಕನಿಗೆ ಮದ್ಯ ಪೂರೈಸಿದ್ದ ಎರಡು ರೆಸ್ಟೋರೆಂಟ್ ಗಳಿಗೆ ಬೀಗ

ಪುಣೆ: ಬಾಲಕನೊಬ್ಬ ಮದ್ಯದ ನಶೆಯಲ್ಲಿ ವಿಲಾಸಿ ಕಾರು ‘ಪೋಶೆ’ ಚಾಲನೆ ಮಾಡಿ ಇಬ್ಬರು ಟೆಕಿಗಳ ಸಾವಿಗೆ ಕಾರಣವಾದ ಪ್ರಕರಣದಲ್ಲಿ, ಬಾಲಕನಿಗೆ ಮದ್ಯ ಪೂರೈಸಿದ್ದ ಎರಡು ರೆಸ್ಟೋರೆಂಟ್ ಗಳಿಗೆ ಬೀಗ ಜಡಿಯಲಾಗಿದೆ.


ಪುಣೆ ಜಲ್ಲಾಧಿಕಾರಿಯ ಆದೇಶದ ಮೇರೆಗೆ ಮಹಾರಾಷ್ಟ್ರದ ಅಬಕಾರಿ ಇಲಾಖೆಯು ಕ್ರಮ ಕೈಗೊಂಡಿದೆ. ಕೋಸಿ ರೆಸ್ಟೋರೆಂಟ್ ಮತ್ತು ಹೋಟೆಲ್ ಬ್ಲಾಕ್ ಕ್ಲಬ್ ಗೆ ಬೀಗ ಜಡಿಯಲಾಗಿದೆ.


ಬಾಲಕ ತಮ್ಮ ಗೆಳೆಯರೊಂದಿಗೆ ಶನಿವಾರ ರಾತ್ರಿ 9.30ರಿಂದ ಮಧ್ಯರಾತ್ರಿ 1ರ ನಡುವೆ ರೆಸ್ಟೋರೆಂಟ್ ಗೆ ತೆರಳಿ ಮದ್ಯಪಾನ ಮಾಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version