ಯಾದಗಿರಿಯ ಇಬ್ಬರು SDPI ಕಾರ್ಯಕರ್ತರು ಪೊಲೀಸ್ ವಶಕ್ಕೆ

Prasthutha|

ಯಾದಗಿರಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಬಂದೇನವಾಝ್ ಗೋಗಿ, ಕಾರ್ಯಕರ್ತ ಮುಹಮ್ಮದ್ ಹಸೀಮ್ ಪಟೇಲ್ ಗೋಗಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ಶಹಾಪುರ ತಾಲೂಕಿನ ಗೋಗಿ ಪೊಲೀಸರು ಎಸ್ ಡಿಪಿ ಐ ಕಾರ್ಯಕರ್ತರನ್ನು ಅವರ ಮನೆಗಳಿಂದ ಬಂಧಿಸಿದ್ದಾರೆ.

ಎಲ್ಲ ಕಡೆ ಪಿ ಎಫ್ ಐ ಸಂಘಟನೆಯ ಕಾರ್ಯಕರ್ತರ ಮೇಲೆ ದಾಳಿ ನಡೆಯುತ್ತಿರುವ ಕಾರಣ ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ  ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.



Join Whatsapp