ಮಧ್ಯಪ್ರದೇಶ: ಶಾಕ್ಯ ಸಮುದಾಯಕ್ಕೆ ಸೇರಿದ ಇಬ್ಬರ ತಲೆಯನ್ನು ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.
ಭಿಂದ್ ದೇಹತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪಂಚಾಯಿತಿ ತೆಗೆದ ನಿರ್ಧಾರದಂತೆ ಇಬ್ಬರ ಮೇಲೆ ಈ ರೀತಿಯ ಅಮಾನುಷ ಕೃತ್ಯವೆಸಗಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂತ್ರಸ್ತರು ನೀಡಿದ ದೂರಿನನ್ವಯ ಸ್ಥಳೀಯ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಬಂಧಿಸಲಾಗಿದೆ. ಸದ್ಯ ಬಂಧಿತರನ್ನು ಅಕ್ಟೋಬರ್ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಎಸ್. ಶೈಲೇಂದ್ರ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಂತೆ 6 ಜನ ಆರೋಪಿಗಳ ವಿರುದ್ಧ ಎಸ್.ಸಿ/ ಎಸ್.ಟಿ ವಿರೋಧಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ದಿಲೀಪ್ ಶರ್ಮಾ ಎಂಬಾತನನ್ನು ಮತ್ತು ಆತನ ತಂದೆಯನ್ನು ಬಂಧಿಸಲಾಗಿದೆ.