ಗುರ್ಗಾಂವ್ ನಲ್ಲಿ ಮಾಜಿ ಸರಪಂಚ್ ಕುಟುಂಬದ ಮೇಲೆ ಗುಂಡಿನ ದಾಳಿ: ಇಬ್ಬರ ಸಾವು, ನಾಲ್ವರು ಗಂಭೀರ

Prasthutha|

ಗುರ್ಗಾಂವ್: ದೀಪಾವಳಿ ರಾತ್ರಿ ಇಲ್ಲಿನ ಮನೇಸರ್ ಕಸನ್ ಗ್ರಾಮದಲ್ಲಿ ಮಾಜಿ ಸರಪಂಚ್ ಕುಟುಂಬದ ಮೇಲೆ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಎಂಟು ವರ್ಷದ ಬಾಲಕ ಕೂಡ ಸೇರಿದ್ದು, ಸದ್ಯ ಗಾಯಗೊಂಡವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

- Advertisement -

ವೈಯಕ್ತಿಕ ದೇಷದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿ ರಿಂಕು ಎಂಬಾತನೇ ಈ ದಾಳಿಯ ಮಾಸ್ಟರ್ ಮೈಂಡ್ ಎಂದು ಕುಟುಂಬದ ಮೂಲಗಳು ಆರೋಪಿಸಿವೆ.

- Advertisement -

ದೀಪಾವಳಿಯ ಸಂಭ್ರಮದಲ್ಲಿದ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಮಾಜಿ ಸರಪಂಚ್ ಮನೆಗೆ ಅಕ್ರಮ ಪ್ರವೇಶಗೈದ ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಹಳೆಯ ವೈಯಕ್ತಿಕ ದ್ವೇಷದಿಂದ ಮಾಜಿ ಸರಪಂಚ್ ಕುಟುಂಬದ ಮೇಲೆ ದುಷ್ಕರ್ಮಿಗಳ ತಂಡ ಗುಂಡು ಹಾರಿಸಿ ಪರಾರಿಯಾಗಿದೆ ಎಂದು ಪಟೌಡಿ ಪೊಲೀಸ್ ವರಿಷ್ಠಾಧಿಕಾರಿ ವೀರ್ ಸಿಂಗ್ ತಿಳಿಸಿದ್ದಾರೆ. ಗಾಯಾಳುಗಳನ್ನು ಮಡಂತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಹಚ್ಚುವ ನಿಟ್ಟಿನಲ್ಲಿ ತನಿಖೆ ಮುಂದುವರಿಸಿರುವುದಾಗಿ ಅವರು ತಿಳಿಸಿದ್ದಾರೆ.

Join Whatsapp