ಕಾರು ಡಿಕ್ಕಿ: ಇಬ್ಬರು ಸಾಫ್ಟ್ ವೇರ್ ಇಂಜಿನಿಯರ್ ಗಳು ಸಾವು

Prasthutha|

ಚೆನ್ನೈ: ಕಾರೊಂದು ಡಿಕ್ಕಿ ಹೊಡೆದು ಇಬ್ಬರು ಮಹಿಳಾ ಸಾಫ್ಟ್‌ ವೇರ್‌ ಇಂಜಿನಿಯರ್‌ ಗಳು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

- Advertisement -

ಚೆನ್ನೈನ ಐಟಿ ಕಾರಿಡಾರ್​​ ನ ನವಲೂರಿನಲ್ಲಿರುವ ಹೆಚ್​​​ ಸಿಎಲ್​​​​​​​​ನಲ್ಲಿ ಕೆಲಸ ಮಾಡುತ್ತಿದ್ದ ಎಸ್.ಲಾವಣ್ಯ ಮತ್ತು ಆರ್.ಲಕ್ಷ್ಮಿ ಮೃತ ಪಟ್ಟವರು ಎಂದು ತಿಳಿದು ಬಂದಿದೆ.

ಕಂಪೆನಿಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರು ಇವರಿಗೆ ಡಿಕ್ಕಿ ಹೊಡೆದಿದೆ.

- Advertisement -

ಕಾರನ್ನು ವೇಗವಾಗಿ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಮೋತೀಶ್ ಕುಮಾರ್​ (20) ಅಪಘಾತಕ್ಕೆ ಕಾರಣವಾಗಿದ್ದಾನೆ. ವಾಹನದ ನಿಯಂತ್ರಣ ಕಳೆದುಕೊಂಡಿರುವ ಈತ ಯುವತಿಯರಿಬ್ಬರಿಗೂ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಥಳದಲ್ಲೇ ಯುವತಿಯರು ಮೃತಪಟ್ಟಿದ್ದಾರೆ.



Join Whatsapp