ಖಾಸಗಿ ಕ್ಷಣದ ವೀಡಿಯೋ ವೈರಲ್: ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ

Prasthutha|

ದಾವಣಗೆರೆ: ಖಾಸಗಿ ಕ್ಷಣಗಳ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವುದರಿಂದ ಮನನೊಂದ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.

- Advertisement -

ನಗರದ ಖಾಸಗಿ ಕಾಲೇಜೊಂದರ ಟೆರೆಸ್ ಮೇಲೆ ಪರಸ್ಪರ ಪ್ರೀತಿಸುತ್ತಿದ್ದ ವಿದ್ಯಾರ್ಥಿಗಳಿಬ್ಬರು ಕುಳಿತಿದ್ದ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಶುಕ್ರವಾರ ವೈರಲ್‌ ಆಗಿತ್ತು. ಅವರಿಬ್ಬರು ಎರಡು ತಿಂಗಳ ಹಿಂದೆ ಆ ರೀತಿ ಕುಳಿತಿದ್ದ ಸಂದರ್ಭದಲ್ಲಿ ಅವರ ಅರಿವಿಗೆ ಬಾರದಂತೆ ಪಕ್ಕದ ಕಟ್ಟಡದಲ್ಲಿ ಕುಳಿತಿದ್ದ ಯುವಕರು ತಮ್ಮ ಮೊಬೈಲ್‌ ನಲ್ಲಿ ಸೆರೆಹಿಡಿದಿದ್ದರು.

ಈ ಕೃತ್ಯದಿಂದ ಮನನೊಂದ ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ವಿದ್ಯಾರ್ಥಿಗಳಿಬ್ಬರ ಪೋಷಕರು ಪ್ರತ್ಯೇಕವಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ತಿಳಿಸಿದ್ದಾರೆ.

Join Whatsapp