ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಮೃತ್ಯು

Prasthutha|

ಹುಣಸೂರು : ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹುಣಸೂರು ತಾಲೂಕಿನ ಮೈಸೂರು- ಹಾಸನ ಹೆದ್ದಾರಿಯ ಹೊಸರಾಮನಹಳ್ಳಿ ಬಳಿ ನಡೆದಿದೆ.

- Advertisement -

ಮೌಳೇಶ್ವರ ರೆಡ್ಡಿ ಹಾಗೂ ತೇಜಸ್ ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ಮೌಳೇಶ್ವರ ರೆಡ್ಡಿ, ಸುಹಾನ್, ತೇಜಸ್ ಹಾಗೂ ಶುಭಂಕರ ಕಾರಿನಲ್ಲಿ ಮೈಸೂರಿನ ಕಡೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಮೌಳೇಶ್ವರ ರೆಡ್ಡಿ ತೀವ್ರಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ತೇಜಸ್ ಮೂಸೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ವಿದ್ಯಾರ್ಥಿಗಳು ಮೈಸೂರಿನ ಡಿ.ಆರ್.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲರೂ ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

- Advertisement -

 ಈ ಬಗ್ಗೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp