ಶಾಲಾ ಪ್ರವಾಸದ ಬಸ್ ಪಲ್ಟಿ: ಇಬ್ಬರು ವಿದ್ಯಾರ್ಥಿಗಳು ಮೃತ್ಯು, 47 ಮಂದಿ ಗಾಯ

Prasthutha|

ಮುಂಬೈ: ಗುಡ್ಡಗಾಡು ಪ್ರದೇಶದಲ್ಲಿ ಶಾಲಾ ಪ್ರವಾಸದ  ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇತರ 47 ಮಂದಿ ಗಾಯಗೊಂಡಿರುವ  ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖೊಪೊಲಿ ಪಟ್ಟಣದಲ್ಲಿ ನಡೆದಿದೆ.

- Advertisement -

ಪ್ರವಾಸ ಮುಗಿಸಿಕೊಂಡು ಲೋನವಾಲದಿಂದ ಹಿಂದಿರುಗುವಾಗ ಬ್ರೇಕ್ ವೈಫಲ್ಯದಿಂದಾಗಿ ಚಾಲಕ ಬಸ್ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಬಹುತೇಕ ವಿದ್ಯಾರ್ಥಿಗಳು ಮತ್ತು ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ಲೋನವಾಲ ಮತ್ತು ಖೊಪೊಲಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ 17 ಮತ್ತು 16 ವರ್ಷದ ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮುಂಬೈ ಸಬ್–ಅರ್ಬನ್ ಪ್ರದೇಶದ ಚೆಂಬೂರಿನ ಕೋಚಿಂಗ್ ಕ್ಲಾಸ್ ಒಂದರ ಸುಮಾರು 49 ವಿದ್ಯಾರ್ಥಿಗಳು ಖಾಸಗಿ ಬಸ್’ನಲ್ಲಿ ಪಿಕ್’ನಿಕ್’ಗೆ ತೆರಳಿದ್ದರು. ವಿದ್ಯಾರ್ಥಿಗಳೆಲ್ಲರೂ 10ನೇ ತರಗತಿಯವರು ಎಂದು ತಿಳಿದು ಬಂದಿದೆ.

ಲೋನವಾಲದಲ್ಲಿ ಪಿಕ್’ನಿಕ್ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ, ಬ್ರೇಕ್ ವೈಫಲ್ಯದಿಂದಾಗಿ ಖೊಪೊಲಿ ಬಳಿಯ ಘಾಟಿಯಲ್ಲಿ (ಗುಡ್ಡಗಾಡು ರಸ್ತೆ) ಬಸ್ ಚಾಲಕನು ವಾಹನದ ಮೇಲೆ ತನ್ನ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ” ಎಂದು ಅಧಿಕಾರಿ ಹೇಳಿದರು.

Join Whatsapp