ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವು

Prasthutha|

ಮಡಿಕೇರಿ: ಕೊಡಗು ಜಿಲ್ಲೆಯ ಸಿದ್ದಾಪುರದ ನೆಲ್ಯಹುದಿಕೇರಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸೋಮವಾರ ನಸುಕಿನಲ್ಲಿ ಮೃತಪಟ್ಟಿವೆ.

- Advertisement -

ನೆಲ್ಯಹುದಿಕೇರಿ ಗ್ರಾಮದ ಕೋಣೇರಿರ ಪ್ರಕಾಶ್ ಹಾಗೂ ಸುಮನ್ ಚಂಗಪ್ಪ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ 11 ಕೆ.ವಿ ಸಾಮರ್ಥ್ಯದ ವಿದ್ಯುತ್ ತಂತಿಗಳು ಹಾದುಹೋಗಿದ್ದು, ವಿದ್ಯುತ್ ತಂತಿ ಮೇಲೆ ಮರದ ಕೊಂಬೆ ಬಿದ್ದಿದ್ದರಿಂದ ತಂತಿ ಕೆಳಕ್ಕೆ ಬಾಗಿವೆ.

ಸದ್ಯ ತೋಟದಲ್ಲಿ ಕಾಡಾನೆಗಳು ಹಾದು ಹೋಗುವಾಗ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಪರಿಣಾಮ ಗಂಡು ಕಾಡಾನೆ ಹಾಗೂ ಒಂದು ಹೆಣ್ಣಾನೆ ಸ್ಥಳದಲ್ಲೇ ಸಾವನ್ನಪ್ಪಿವೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join Whatsapp