ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಹಿಳಾ ರೋಗಿಗಳ ಮೇಲೆ ವೈದ್ಯನಿಂದ ಅತ್ಯಾಚಾರ

Prasthutha|

ಕಟಕ್: ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ಆಸ್ಪತ್ರೆಯಲ್ಲಿ ಇಬ್ಬರು ಮಹಿಳಾ ರೋಗಿಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸರ್ಕಾರಿ ವೈದ್ಯನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಭಾನುವಾರ ಮಹಿಳೆಯರು ಎಕೋಕಾರ್ಡಿಯೋಗ್ರಾಮ್ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಯ ಹೃದ್ರೋಗ ವಿಭಾಗಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ.

ವೈದ್ಯರ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ.

- Advertisement -

ಮಂಗಳಬಾಗ್ ಪೊಲೀಸ್ ಠಾಣೆಯು ಸೋಮವಾರ ಇಬ್ಬರು ರೋಗಿಗಳಿಂದ ಲಿಖಿತ ದೂರನ್ನು ಸ್ವೀಕರಿಸಲಾಗಿದೆ ಮತ್ತು ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ಕಟಕ್ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ADCP) ಅನಿಲ್ ಮಿಶ್ರಾ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲೆ ಇತ್ತೀಚೆಗೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ದೇಶಾದ್ಯಂತ ಪ್ರತಿಭಟನೆಯೊಂದಿಗೆ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ.



Join Whatsapp