ಗುಂಡಿನ ದಾಳಿ ನಡೆಸಿ ಇಬ್ಬರು ಮಹಿಳೆಯರ ಹತ್ಯೆ

Prasthutha|

ಹೊಸದಿಲ್ಲಿ : ಇಲ್ಲಿನ ಆರ್​ಕೆ ಪುರಂ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತರು ಗುಂಡಿನ ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ಹತ್ಯೆಗೈದ ಘಟನೆ ನಡೆದಿದೆ.

- Advertisement -

ಗುಂಡಿನ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ಮಹಿಳೆಯರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ನೈಋತ್ಯ ದೆಹಲಿಯ ಉಪ ಪೊಲೀಸ್ ಆಯುಕ್ತ ಮನೋಜ್ ಸಿ ಮಾಹಿತಿ ನೀಡಿದ್ದು, ಆರ್‌ಕೆ ಪುರಂ ಪೊಲೀಸ್ ಠಾಣೆಗೆ ಬೆಳಗ್ಗೆ 4.40 ಕ್ಕೆ ಕರೆ ಬಂದಿದ್ದು, ಅಂಬೇಡ್ಕರ್ ಬಸ್ತಿಯಲ್ಲಿ ಗುಂಡಿನ ದಾಳಿ ನಡೆದಿದೆ ಎನ್ನುವ ಮಾಹಿತಿ ಸಿಕ್ಕಿತ್ತು.

- Advertisement -

ಕರೆಗೆ ಸ್ಪಂದಿಸಿದ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದ್ದಾರೆ. ಇಬ್ಬರು ಮಹಿಳೆಯರಾದ ಪಿಂಕಿ (30) ಮತ್ತು ಜ್ಯೋತಿ (29) ಅವರ ಮೇಲೆ ಗುಂಡು ಹಾರಿಸಲಾಗಿದ್ದು, ಅವರನ್ನು ಎಸ್‌ಜೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Join Whatsapp