ಚರಂಡಿ ಕೆಲಸದ ವೇಳೆ ವಿದ್ಯುತ್ ತಗುಲಿ ಇಬ್ಬರು ಕಾರ್ಮಿಕರು ಮೃತ್ಯು

Prasthutha|

ಬೆಂಗಳೂರು: ಚರಂಡಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಕೋಣನಕುಂಟೆಯ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್’ಮೆಂಟ್ ನಲ್ಲಿ ನಡೆದಿದೆ.

- Advertisement -

ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಘು ಹಾಗೂ ಅಸ್ಸಾಂ ಮೂಲದ ದಿಲೀಪ್ ಮೃತಪಟ್ಟವರು.

ಕೋಣನಕುಂಟೆಯ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್’ಮೆಂಟ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು, ರಾತ್ರಿ ಪಾಳಿಯಲ್ಲಿ ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರ ಮೃತದೇಹಗಳನ್ನುಇರಿಸಲಾಗಿದ್ದು, ಕೋಣನಕುಂಟೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp